ಬೆಂಗಳೂರು: ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳಯುಂಟಾಗುತ್ತಿದೆ. ಸದ್ಯ ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ, ಒಳನಾಡು ಮತ್ತು ಮೈಸೂರು ಭಾಗದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಇತ್ತ ಉತ್ತರ ಕರ್ನಾಟಕ ಭಾಗದಲ್ಲಿ ಒಣ ಹವೆ ಮುಂದುವರಿಯಲ್ಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳು ಸಹ ಕಡಿಮೆ. ಇನ್ನುಳಿದಂತೆ ರಾಜ್ಯದಲ್ಲಿ ಚಳಿಗಾಲ ಆರಂಭವಾಗುತ್ತಿದ್ದು, ಬೆಳಗಿನ ಜಾವ ಮತ್ತು ಸಂಜೆ ಶೀತಗಾಳಿಯ ಅನುಭವವಾಗುತ್ತಿದೆ.
PublicNext
06/11/2021 12:17 pm