ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 9ರವರೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಮುಂದಿನ 2 ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು ಮತ್ತು ನಾಳೆ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಬೆಂಗಳೂರು,ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ತುಮಕೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
PublicNext
07/11/2021 09:47 am