ಬೆಂಗಳೂರು : ಬಂಗಾಳಕೊಲ್ಲಿ ಹಾಗೂ ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ಬೆಂಗಳೂರಲ್ಲಿ ಮುಂದಿನ 24 ಗಂಟೆ ಯಲ್ಲಿ ಭಾರಿ ಮಳೆಯಾಗುವ ಎಚ್ಚ ರಿಕೆಯನ್ನು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಪಬ್ಲಿಕ್ ನೆಕ್ಸ್ಟ್ ಜತೆ ಮಾತನಾಡಿದ ರಾಜ್ಯ ಹವಾಮಾನ ಇಲಾಖೆಯ ಹಿರಿಯ ಅಧಿಕಾರಿ ಸದಾಶಿವ ಅಡಿಗ ರವರು, ರಾಜಧಾನಿ ಬೆಂಗಳೂರಲ್ಲಿ ನಾಳೆ ಭಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ ಎಂದರು. ಬಂಗಾಳಕೊಲ್ಲಿ ಹಾಗೂ ದಕ್ಷಿಣ ಅಂಡಮಾನ ಸಮುದ್ರ ಪ್ರದೇಶದ ಲ್ಲಿ ಮೇಲ್ಮೈ ಸುಳಿಗಾಳಿ ಇದೆ. ಪರಿಣಾಮ ತಮಿಳುನಾಡು ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ.
ಈ ಹಿನ್ನೆಲೆಯಲ್ಲಿ ನಾಳೆ ಬೆಂಗಳೂ ರಲ್ಲಿ ಮಳೆಯ ಪ್ರಮಾಣ ಹೆಚ್ಚಾ ಗುವ ಸಂಭವ ಇದೆ.ನಗರದಲ್ಲಿ ಇಂದು ತುಂತುರು ಮಳೆ ಅಗುತ್ತಿದ್ದು, ಮೋಡ ಕವಿದ ವಾತಾವಾರಣ ಇದೆ.ಸೈಕ್ಲೋನಿಕ್ ಸೆರ್ಕ್ಯೂಲೇಷನ್ ಪರಿಣಾಮ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದೇ ವೇಳೆ ನಗರದಲ್ಲಿ 7 - 10 ಸೆ.ಮೀ ಮಳೆ ಆಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆ ಆಗಲಿದೆ.
2014ರ ಬಳಿಕ ನವೆಂಬರ್ ತಿಂಗಳಲ್ಲಿ ಈ ರೀತಿಯ ಮಳೆ ಅಗುತ್ತಿದ್ದು, ಇದೇ ತಿಂಗಳ 11ನೇ ತಾರೀಕಿನಂದು ಭಾರಿ ಮಳೆ ಆಗುವ ಸಂಭವ ಇದೆ ಎಂದು ಎಚ್ಚರಿಕೆ ನೀಡಿದೆ.
PublicNext
08/11/2021 04:56 pm