ಬೆಂಗಳೂರು, ಬಳ್ಳಾರಿ, ದಾವಣಗೆರೆ, ಮೈಸೂರು, ಮಲೆನಾಡು ಸೇರಿದಂತೆ ಕರ್ನಾಟಕದ 13 ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಿದೆ.
ಇಂದು ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು ಭಾರೀ ಮಳೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನವೆಂಬರ್ 11ರಂದು ತಮಿಳುನಾಡನ್ನು ಸುಳಿಗಾಳಿ ಪ್ರವೇಶಿಸುವ ಸಾಧ್ಯತೆಯಿದೆ. ಇಂದು ಮತ್ತು ನವೆಂಬರ್ 11ರಂದು ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳನ್ನು ಹೊರತುಪಡಿಸಿ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಳದಿ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ವ್ಯಾಪಕ ಸಾಧಾರಣ ಮಳೆಯ ಸಾಧ್ಯತೆಯಿದ್ದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇನ್ನೆರಡು ದಿನಗಳ ಕಾಲ ತಮಿಳುನಾಡಿನ ಹಲವೆಡೆ ರೆಡ್ ಅಲರ್ಟ್ ಘೋಷಿಸಿದೆ. ತಮಿಳುನಾಡಿನ 14 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 11ರವರೆಗೂ ತಮಿಳುನಾಡಿನಲ್ಲಿ ವಿಪರೀತ ಮಳೆಯಾಗಲಿದೆ.
PublicNext
10/11/2021 02:40 pm