ಬೆಂಗಳೂರು : ಇಂದು ಸಂಜೆ ಹಾಗೂ ನಾಳೆ ಬೆಂಗಳೂರಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಇದೆ.ಹೀಗಾಗಿ ಹವಮಾನ ಇಲಾಖೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ.
ಇಂದು ಬೆಂಗಳೂರಲ್ಲಿ ಬೆಳಗ್ಗೆಯಿಂದ 4.2 ಮಿ.ಮಿ.ಮಳೆಯಾಗಿದೆ .ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ಇನ್ನೂ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಜೊತೆಗೆ ಬೆಂಗಳೂರಲ್ಲಿ ಚಳಿಯ ವಾತಾವರಣ ಮುಂದುವರೆಯಲಿದೆ.
PublicNext
11/11/2021 08:51 pm