ಬೆಂಗಳೂರು: ಹೊತ್ತಲ್ಲದ ಹೊತ್ತಲ್ಲಿ ಬಂದ ಮಳೆಗೆ ಜನ ತತ್ತರಿಸಿದ್ದಾರೆ. ಹಿಂಗಾರಿನ ಅಂತ್ಯದ ವೇಳೆ ಮುಂಗಾರನ್ನು ನೆನಪಿಸುವಂತೆ ಮಳೆ ಸುರಿಯುತ್ತಿದೆ. ಸದ್ಯ ಕೆಲವೆಡೆ ಜನ-ಜೀವನ ಅಸ್ತವ್ಯಸ್ತಗೊಂಡಿದೆ. ರೈತರ ಬೆಳೆ ನಷ್ಟವಾಗಿದೆ. ಪರಿಸ್ಥಿತಿ ಹೀಗಿರುವಾಗ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 23ರವರೆಗೆ ಭಾರೀ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ. ರಾಜ್ಯದ ಹಾಸನ ಕೊಡಗು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗಜಿಲ್ಲೆಗಳಲ್ಲಿ ಭಾರೀ ಮಳೆಯಾಲಿದ್ದು, ಈ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ.
PublicNext
18/11/2021 08:38 pm