ಕೊಪ್ಪಳ: ಸತತ ಮಳೆ ಸುರಿದ ಪರಿಣಾಮ ತುಂಗಭದ್ರಾ ಜಲಾಶಯದ ಪಂಪಾಸಾಗರ ಭರ್ತಿಯಾಗಿದೆ. ಈ ಹಿನ್ನಲೆಯಲ್ಲಿ ನದಿಗೆ ನೀರು ಬಿಡಲಾಗಿದೆ. ಹೀಗಾಗಿ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿರುವ ಶ್ರೀಕೃಷ್ಣದೇವರಾಯರ ಸಮಾಧಿ ಜಲಾವೃತಗೊಂಡಿದೆ.
ತುಂಗಭದ್ರಾ ಜಲಾಶಯದಿಂದ ನದಿಗೆ 45 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆಗೊಳಿಸಲಾಗಿದೆ. ಅಣೆಕಟ್ಟಿನಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆ ಇದೆ. ನದಿ ಮೈದುಂಬಿ ಹರಿಯುತ್ತಿರುವುದರಿಂದ ಐತಿಹಾಸಿಕ ನವವೃಂದಾವನ ಗಡ್ಡೆಯ ಸಂಪರ್ಕ ಸಹ ಸ್ಥಗಿತಗೊಂಡಿದೆ.
PublicNext
20/11/2021 12:47 pm