ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಹವಾಮಾನ ಇಲಾಖೆ ವರದಿ ಪ್ರಕಾರ ಇಂದು ನ.20 ರಾಜ್ಯದ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುತ್ತಿದೆ.
ಹಾಗಾಗಿಯೇ ತುಮಕೂರು, ಶಿವಮೊಗ್ಗ, ರಾಮನಗರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.
ಎರಡು ದಿನಗಳಿಂದ ಹವಾಮಾನದಲ್ಲಿ ಮುಂದುವರಿದಿರುವ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ನ.22ರಿಂದ ರಾಜ್ಯದಲ್ಲಿ ಮಳೆ ತಗ್ಗಲಿದೆ.
PublicNext
20/11/2021 05:40 pm