ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತ ಪರಿಣಾಮ ಮುಂದಿನ ನಾಲ್ಕೈದು ದಿನ ಮತ್ತೆ ವರುಣಾರ್ಭಟ ಶುರುವಾಗಲಿದೆ ಎಂದು ಹವಾಮಾನ ತಜ್ಞ ಸದಾನಂದ ಅಡಿಗ ಪಬ್ಲಿಕ್ ನೆಕ್ಸ್ಟ್ ಗೆ ತಿಳಿಸಿದ್ದಾರೆ.
ನಿರಂತರವಾಗಿ ಸುರಿದ ಮಳೆ ಈಗಷ್ಟೇ ಕೊಂಚ ಬ್ರೇಕ್ ಕೊಟ್ಟಿದೆ. ಈಗ ಮತ್ತೆ ಮಳೆ ಎನ್ನುವ ಸುದ್ದಿ ಜನರನ್ನು ಆತಂಕಕ್ಕೀಡುಮಾಡಿದೆ.
ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿಯಲ್ಲಿ ಭಾರಿ ಮಳೆ ಆಗುವ ಸೂಚನೆ ಇದೆ. ರಾಜ್ಯದಲ್ಲಿ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ.
PublicNext
23/11/2021 01:33 pm