ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ದ್ರಾಕ್ಷಿ, ರಾಗಿ, ತೋಗರಿ,ಭತ್ತ ಹೂವಿನ ಬೆಳೆಗಳು ಸೇರಿ ಬಹುತೇಕ ಬೆಳೆಗಳು ಸಂಪೂರ್ಣ ಜಲಮಯವಾಗಿದೆ. ಚಿಕ್ಕಬಳ್ಳಾಪುರ ಹೊರವಲಯದ ಕೃಷಿ ಭೂಮಿಗಳಲ್ಲಿ ಜಲಾವೃತದ ದೃಶ್ಯಗಳು ಕಣ್ಣೀರು ತರಿಸುವಂತಿವೆ.
ಕೈಗೆ ಬಂದ ಬೆಳೆ ಬಾಯಿಗೆ ಬರದಂತಾದ ಪರಿಸ್ಥಿತಿಯಲ್ಲಿರುವ ರೈತರು ತಲೆಮೇಲೆ ಕೈ ಹೊತ್ತು ಕೂತಿದ್ದಾರೆ. ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2 ಲಕ್ಷಕ್ಕೂ ಹೆಚ್ಚು ಎಕರೆ ಪ್ರದೇಶದ ಬೆಳೆ ಹಾನಿಯಾಗಿದೆ.
ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾದ ಹಿನ್ನೆಲೆಯಲ್ಲಿ ಬೆಳೆಗಳು ಜಲಾವೃತವಾಗಿದೆ.
PublicNext
23/11/2021 02:25 pm