ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದಿನಿಂದ 3 ದಿನ ಚಂಡಮಾರುತ ಮಳೆ: ಎಲ್ಲ ಜಿಲ್ಲೆಗಳಲ್ಲಿ ಕಟ್ಟೆಚ್ಚರ

ಬೆಂಗಳೂರು: ಈಗಾಗಲೇ ಭಾರೀ ಮಳೆಯಿಂದ ಕರ್ನಾಟಕದ ಜನರು ಕಂಗಾಲಾಗಿದ್ದಾರೆ. ಮತ್ತೆ ಇಂದಿನಿಂದ ಚಂಡಮಾರುತದ ಆತಂಕ ಎದುರಾಗಿರುವುದರಿಂದ ಇನ್ನೂ 3 ದಿನ (ನ. 28ರವರೆಗೂ) ಭಾರೀ ಮಳೆಯಾಗಲಿದೆ.

ತಮಿಳುನಾಡಿಗೆ ಇವತ್ತು ಚಂಡಮಾರುತ ಅಪ್ಪಳಿಸಲಿದೆ. ಈಗಾಗಲೇ ತಮಿಳುನಾಡಿನ ತೀರ ಪ್ರದೇಶದ ಜಿಲ್ಲೆಗಳಲ್ಲಿ ಮಳೆಯಾಗ್ತಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇವತ್ತು, ನಾಳೆ, ನಾಡಿದ್ದು ಮೂರು ದಿನ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಧಾರಾಕಾರ ಮಳೆ ಆಗುವ ಆಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕಂದಾಯ ಸಚಿವ ಆರ್. ಅಶೋಕ್, ಇಂದಿನಿಂದ ನವೆಂಬರ್ 28ರವರೆಗೆ ಚಂಡಮಾರುತದ ಭೀತಿ ಎದುರಾಗಿರುವುದರಿಂದ ಮುಂಜಾಗ್ರತಾ ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದ ಅವಾಂತರಗಳು ಸೃಷ್ಟಿಯಾಗುವ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಡಿಸಿಗಳು ಚಂಡಮಾರುತ ಹಾಗೂ ಮಳೆಯ ಹಾನಿಯ ನಿಯಂತ್ರಣದ ಕಡೆ ಗಮನ ನೀಡಬೇಕು ಎಂದು ಹೇಳಿದ್ದಾರೆ.

Edited By : Vijay Kumar
PublicNext

PublicNext

26/11/2021 08:07 am

Cinque Terre

26.23 K

Cinque Terre

1