ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತರಗತಿಗೆ ಬಂದ ಚಿರತೆ.! ವಿದ್ಯಾರ್ಥಿ ಮೇಲೆ ದಾಳಿ

ಲಕ್ನೋ: ಚಿರತೆಯೊಂದು ತರಗತಿಯೊಳಗೆ ನುಗ್ಗಿ ವಿದ್ಯಾರ್ಥಿಯ ಮೇಲೆ ದಾಳಿ ಮಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಲಿಗಢ್ ಜಿಲ್ಲೆಯ ಚೌಧರಿ ನಿಹಾಲ್ ಸಿಂಗ್ ಇಂಟರ್ ಕಾಲೇಜಿನಲ್ಲಿ ನಡೆದಿದೆ.

ವಿದ್ಯಾರ್ಥಿ ತರಗತಿಯೊಳಗೆ ಹೋಗುತ್ತಿದ್ದಾಗ ಚಿರತೆ ಕಾಣಿಸಿಕೊಂಡಿದೆ. ತಕ್ಷಣವೇ ಆ ವಿದ್ಯಾರ್ಥಿ ಓಡಿಹೋಗಲು ಯತ್ನಿಸಿದ್ದಾನೆ. ಆದರೆ ಚಿರತೆ ಹಿಂಬದಿಯಿಂದ ದಾಳಿ ಮಾಡಿದೆ. ಅದೃಷ್ಟವಶಾತ್ ವಿದ್ಯಾರ್ಥಿಯು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಳಿಕ ತರಗತಿಯಲ್ಲಿ ಚಿರತೆ ಕುಳಿತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚಿರತೆ ತರಗತಿಗೆ ನುಗ್ಗಿದ ಸುದ್ದಿ ತಿಳಿಯುತ್ತಿದ್ದಂತೆ ಶಾಲಾ ಅಧಿಕಾರಿಗಳು, ಅರಣ್ಯಾಧಿಕಾರಿಗಳು ಹಾಗೂ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಚಿರತೆ ಸೆರೆ ಹಿಡಿಯುವ ಕಾರ್ಯ ಆರಂಭಿಸಿದ್ದಾರೆ.

Edited By : Shivu K
PublicNext

PublicNext

01/12/2021 07:19 pm

Cinque Terre

80.48 K

Cinque Terre

3