ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದ ದಕ್ಷಿಣ ಒಳನಾಡಿನಲ್ಲಿ 4 ದಿನ ಮಳೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನೂ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದಿನಿಂದ 4 ದಿನ ಮಳೆ ಸುರಿಯಲಿದೆ. ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಇಂದು ಒಣಹವೆ ಇರಲಿದ್ದು, ಮಲೆನಾಡಿನಲ್ಲಿ ಮಳೆ ಮುಂದುವರೆಯಲಿದೆ.ಇಂದಿನಿಂದ 7 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ಚೆನ್ನೈನಲ್ಲಿ ಭಾರೀ ಮಳೆಯಿಂದ ಇಂದು ‘ಆರೆಂಜ್’ ಅಲರ್ಟ್ ನೀಡಲಾಗಿದೆ. ಇಂದು ಮತ್ತು ಡಿಸೆಂಬರ್ 9ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ.

Edited By : Nirmala Aralikatti
PublicNext

PublicNext

08/12/2021 07:52 am

Cinque Terre

23.19 K

Cinque Terre

0

ಸಂಬಂಧಿತ ಸುದ್ದಿ