ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸ ವರ್ಷದ ಮೊದಲ 2 ದಿನ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಜನವರಿ 1 ಹಾಗೂ 2ರಂದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ‌ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ಮಳೆ ಸುರಿಯುವ ಸಾಧ್ಯತೆ ಇದೆ. ಮೈಸೂರು, ಮಂಡ್ಯ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ಶುಕ್ರವಾರ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಕಂಡುಬಂದಿತ್ತು.

ನಾಳೆ ಮಳೆ ಸುರಿದರೆ ಹೊಸ ವರ್ಷದ ಮೊದಲ ದಿನವನ್ನು ಮಳೆಯ ಮೂಲಕ ಸ್ವಾಗತಿಸಬೇಕಾಗುತ್ತದೆ.

Edited By : Nagaraj Tulugeri
PublicNext

PublicNext

31/12/2021 10:27 pm

Cinque Terre

45.54 K

Cinque Terre

2