ತಿರುವನಂತಪುರ: ಹೆಬ್ಬಾವೊಂದು ರಸ್ತೆ ದಾಟುತ್ತಿರುವ ಅಪರೂಪದ ದೃಶ್ಯವೊಂದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕೊಚ್ಚಿಯ ಕಲಮಸ್ಸೆರಿ ಬಳಿಯ ಕೆಎಸ್‌ಇಬಿ ಕಚೇರಿ ಬಳಿ ಜನನಿಬಿಡ ಪ್ರದೇಶದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಹೆಬ್ಬಾವನ್ನು ನೋಡಿದ ವಾಹನ ಸವಾರರು ರಸ್ತೆ ದಾಟುವವರೆಗೆ ವಾಹನಗಳನ್ನು ನಿಲ್ಲಿಸಿದ್ದಾರೆ. ಈ ದೃಶ್ಯವನ್ನು ಅಲ್ಲಿನ ಸ್ಥಳೀಯರು ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
PublicNext
12/01/2022 09:46 am