ದೆಹಲಿ: ಇಂದು ಬುಧವಾರ ನಸುಕಿನ ಜಾವ ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ದಕ್ಷಿಣ-ನೈಋತ್ಯಕ್ಕೆ 15 ಕಿಮೀ ದೂರದಲ್ಲಿ ಇಂದು ಬೆಳಗ್ಗೆ 5:43ರ ಸುಮಾರಿಗೆ ಭೂಕಂಪನ ಸಂಭವಿಸಿದೆ. ಇದರಿಂದ ಆಗಿರುವ ಪರಿಣಾಮಗಳ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ತಿಳಿದಿಲ್ಲ.
3.2 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಎನ್‌ಸಿಎಸ್ ಟ್ವೀಟ್ ಮಾಡಿದೆ.
PublicNext
16/02/2022 07:17 am