ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಮುಂದಿನ 4 ದಿನ ಅಲ್ಲಲ್ಲಿ ತುಂತುರು ಮಳೆ

ಬೆಂಗಳೂರು: ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಬೀಸುತ್ತಿದೆ. ಇದರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ತುಂತುರು ಮಳೆ ಆಗೋ ಸಾಧ್ಯತೆ ಹೆಚ್ಚಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಸದ್ಯ ಮೋಡ ಕವಿದ ವಾತಾವರಣ ಇದೆ.ಕನಿಷ್ಠ ತಾಪಮಾನ ಕಂಡು ಬರಲಿದೆ.30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಹಾಗೂ 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಲಿದೆ.

ಕರಾವಳಿ ಭಾಗದಲ್ಲಿ ತಂಪಾದ ಗಾಳಿ ಬೀಸುವ ಸಾಧ್ಯತೆ ಅತಿ ಹೆಚ್ಚಿದ್ದು ತುಂತುರು ಮಳೆ ಕೂಡ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Edited By :
PublicNext

PublicNext

09/03/2022 07:43 am

Cinque Terre

30.73 K

Cinque Terre

0