ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಕಾರಣದಿಂದ ಇದು ಚಂಡಮಾರುತವಾಗಿ ಬದಲಾವಣೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತುಮಕೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳನ್ನ ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ಮಾರ್ಚ್ 20 ರಂದು ದಾವಣಗೆರೆ, ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. 20, 21 ರಂದು ಕರಾವಳಿ ಭಾಗದಲ್ಲಿ, ಉತ್ತರ ಒಳನಾಡಿನ ಕೊಪ್ಪಳ,ರಾಯಚೂರು, ಕಲಬುರಗಿ, ಯಾದಗಿರಿಯಲ್ಲಿ 20, 21 ರಂದು ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.
19,20 ರಂದು ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ,ಹಾಸನ,ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ.
PublicNext
19/03/2022 12:09 pm