ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಆಗುವ ಸಂಭವ ಇದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಾ.24ರಿಂದ ಮಾ.28ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಮಾ.24 ಮತ್ತು ಮಾ.25ರಂದು ಈ ಭಾಗದಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಾ.24 ರಿಂದ ಮಾ.26ರವರೆಗೆ ಮಳೆಯಾಗಲಿದೆ. ಮಾ.27 ಮತ್ತು 28ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದೆ.
PublicNext
24/03/2022 08:12 am