ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.8 ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ದೃಢಪಡಿಸಿದೆ.
ಶನಿವಾರ ರಾತ್ರಿ 7.51ಕ್ಕೆ ವಿಜಯಪುರದ ಬಸವೇಶ್ವರ ನಗರ ಮತ್ತು ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಭೂಮಿ ಕಂಪನಿಸಿದ ಅನುಭವವಾಗಿದ್ದು, ಈ ಭೂಕಂಪನವು ಭೂಮಿಯಿಂದ 10 ಕಿಮೀ ಆಳದಲ್ಲಿ ಉಂಟಾಗಿದೆ ಎಂದು ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.
PublicNext
27/03/2022 08:31 am