ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದಿನಿಂದ 4 ದಿನ ಮಳೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಏಪ್ರಿಲ್ 6ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಳೆ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ ನಾಲ್ಕು ದಿನ ಬೆಂಗಳೂರು, ಮೈಸೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಕೋಲಾರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

Edited By : Nirmala Aralikatti
PublicNext

PublicNext

03/04/2022 08:04 am

Cinque Terre

25.9 K

Cinque Terre

0

ಸಂಬಂಧಿತ ಸುದ್ದಿ