ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು, ತುಮಕೂರು, ದಾವಣಗೆರೆ, ಗದಗ, ಚಿತ್ರದುರ್ಗ, ಶಿವಮೊಗ್ಗ, ಧಾರವಾಡ, ಚಿಕ್ಕಮಗಳೂರು, ಉತ್ತರ ಕನ್ನಡ, ಮಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವರುಣ ಅಬ್ಬರಿಸಿದ್ದಾನೆ. ಪರಿಣಾಮ ಹಲವು ಕಡೆ ಜನ ಜೀವನ, ಸಂಚಾರ ಅಸ್ತವ್ಯಸ್ತವಾಯಿತು.
ಇನ್ನು ಈ ಮಧ್ಯೆ ಹವಾಮಾನ ಇಲಾಖೆಯು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಯಲ್ಲಿ ಅತಿ ಭಾರಿ ಮಳೆಯ 'ಆರೆಂಜ್ ಅಲರ್ಟ್' ಘೋಷಣೆ ಮಾಡಿದೆ. ಅಷ್ಟೇ ಅಲ್ಲದೆ ಬೀದರ್, ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ 'ಎಲ್ಲೋ ಅಲರ್ಟ್' ಘೋಷಣೆ ಮಾಡಲಾಗಿದೆ.
PublicNext
16/04/2022 08:49 pm