ಬೆಂಗಳೂರು: ಒಂದು ವಾರದಿಂದ ರಾಜಧಾನಿ ಬೆಂಗಳೂರನ್ನು ಬೆನ್ನಟ್ಟಿರುವ ಮಳೆ ಸಂಜೆ ಹೊತ್ತಲ್ಲಿ ಭಾರಿ ಪ್ರಮಾಣದಲ್ಲಿ ಸುರಿಯುತ್ತಿದೆ. ಇನ್ನೂ ಹಲವು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾಣ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಪ್ರದೇಶಗಳಾದ ತಮಿಳುನಾಡು, ತೆಲಂಗಾಣದಲ್ಲಿ ಚಂಡಮಾರುತ ಎದ್ದಿರುವ ಕಾರಣ ಕರ್ನಾಟಕದ ಹಲವು ರಾಜ್ಯಗಳಲ್ಲಿ ಇನ್ನು ಕೆಲ ದಿನ ತುಂತುರು ಮಳೆಯಾಗುವ ಸಾಧ್ಯತೆ ಇದೆ ಅಂತ ಐಎಂಡಿ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಸಂಜೆ ಹೊತ್ತಿಗೆ ಮಳೆ ಆರಂಭವಾಗಿ ಮಧ್ಯರಾತ್ರಿವರೆಗೂ ಸುರಿಯುತ್ತಿತ್ತು. ಇನ್ನು ಈ ಅಕಾಲಿಕ ಮಳೆಯಿಂದಾಗಿ ರಾಜ್ಯದ ಜನರು ಸಹ ಹೈರಾಣಾಗಿ ಹೋಗಿದ್ದು, ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯನ್ನು ಸಹಿಸಿಕೊಳ್ಳಬೇಕಾದ ಸ್ಥಿತಿ ಎದುರಾಗಿದೆ. ಕೇವಲ ಬೆಂಗಳೂರು ಮಾತ್ರವಲ್ಲದೆ ದಕ್ಷಿಣ ಕರ್ನಾಟಕ ಮತ್ತು ಒಳನಾಡು ಭಾಗಗಳಲ್ಲಿ ಹಾಗೂ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಚಿಕ್ಕಬಳ್ಳಾಪುರ ಸೇರಿ ಕರ್ನಾಟಕದ ಕೆಲವು ಜಿಲ್ಲೆಗಳಲ್ಲೂ ಕೂಡ ಹಗುರ ಮಳೆಯಾಗಿದೆ.
PublicNext
20/04/2022 02:29 pm