ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಗುರುವಾರ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5ರಷ್ಟು ಕಂಪನದ ತೀವ್ರತೆ ದಾಖಲಾಗಿದೆ.
ಇಂದು ಗುರುವಾರ ಬೆಳಿಗ್ಗೆ 5-45ರ ಹೊತ್ತಿಗೆ ಭೂಕಂಪನ ತೀವ್ರತೆ ದಾಖಲಾಗಿದೆ. ಭೂಮಿಯ ಒಳಪದರದ 108ಕಿ.ಮೀ ಆಳದಲ್ಲಿ ಕಂಪನವಾಗಿದೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯ ಆಸ್ತಿ-ಪಾಸ್ತಿ ಹಾನಿ ಆದ ಬಗ್ಗೆ ವರದಿ ಆಗಿಲ್ಲ.
PublicNext
05/05/2022 12:38 pm