ದಾವಣಗೆರೆ: ಜಿಲ್ಲೆಯಾದ್ಯಂತ ಮಳೆ ಆರ್ಭಟ ಜೋರಾಗಿದೆ. ಎಡೆಬಿಡದೇ ಸುರಿಯುತ್ತಿರುವ ಮಳೆಗೆ ಹತ್ತು ಕೋಟಿ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿದೆ. ಹತ್ತು ಸಾವಿರಕ್ಕೂ ಹೆಚ್ಚು ಎಕರೆಯಲ್ಲಿ ಬೆಳೆದಿದ್ದ ಭತ್ತ ನಾಶವಾಗಿದೆ. ಇನ್ನು ಮಳೆ ಮುಂದುವರಿದಿರುವ ಕಾರಣ ನಷ್ಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಸೇತುವೆಗಳು ಅಲ್ಲಲ್ಲಿ ಕುಸಿದು ಬಿದ್ದಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಬ್ಧವಾಗಿದೆ. ಜೊತೆಗೆ ರಸ್ತೆ ಮೇಲೆಲ್ಲಾ ನೀರು ನಿಂತಿದ್ದು, ಜನರ ಓಡಾಟಕ್ಕೂ ತೊಂದರೆ ಆಗಿದೆ. ಮನೆಗಳಿಗೆ ನೀರು ನುಗ್ಗಿದ್ದರೆ, ಕೆಲ ಗ್ರಾಮೀಣ ಭಾಗದ ಶಾಲೆಗಳ ಆವರಣಗಳು ನೀರಿನಿಂದ ಜಲಾವೃತಗೊಂಡಿವೆ. ವರುಣನ ರುದ್ರನರ್ತನಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ.
ಈ ಸಂದರ್ಭದಲ್ಲಿ ಸಂಸದರಾದ ಜಿ.ಎಂ ಸಿದ್ಧೇಶ್ವರ, ಮಾಜಿ ಶಾಸಕ ಬಿ.ಪಿ ಹರೀಶ್, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಹರಿಹರ ತಾಲೂಕು ರಾಮತೀರ್ಥ ಗ್ರಾಮದಲ್ಲಿ ಧಾರಾಕಾರ ಮಳೆಯಿಂದಾಗಿ ಸೂಳೆಕೆರೆ ಕೆರೆ ತುಂಬಿ ಕೋಡಿ ಬಿದ್ದಿದೆ. ಹಳ್ಳ ತುಂಬಿ ಹರಿದ ಪರಿಣಾಮ ಬಾಳೆ, ಭತ್ತ ಸೇರಿದಂತೆ ಹಲವು ಬೆಳೆ ಹಾನಿಯಾಗಿದೆ. ಬೆಳ್ಳೂಡಿ ಮತ್ತು ರಾಮತೀರ್ಥ ಗ್ರಾಮದ ದಾರಿ ಸ್ಥಗಿತವಾಗಿದೆ. ಜನರು ಪರದಾಡುವಂತಾಗಿದೆ.
PublicNext
20/05/2022 06:52 pm