ವರದಿ- ಗಣೇಶ್ ಹೆಗಡೆ
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಜೂನ್ 3 ಕ್ಕೆ ಆರಂಭವಾಗುವ ಸಾಧ್ಯತೆಗಳಿದೆ. ಈಗಾಗಲೇ ಮಳೆಯ ವಾತಾವರಣ ನಿರ್ಮಾಣವಾಗಿದ್ದು, ನೈರುತ್ಯ ಮುಂಗಾರು ವಾಡಿಕೆಯಂತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನೂ ಮೇ 3ನೇ ವಾರದಲ್ಲಿ ಮಳೆ ಆರಂಭವಾಗುತ್ತದೆ ಎಂದು ಈ ಹಿಂದೆ ಹವಾಮಾನ ಇಲಾಖೆ ತಿಳಿಸಿತ್ತು. ಆದರೆ ಮಳೆಯ ಪ್ರಮಾಣ ಇಳಿಮುಖವಾಗಿ ಒಣಹವೆ ಹೆಚ್ಚಾಗಿ ಕಂಡು ಬರುತ್ತಿದೆ. ಚಂಡಮಾರುತದ ಬೆನ್ನಲ್ಲೇ ಮೇ ತಿಂಗಳಿನಲ್ಲಿ ಎರಡು ವಾರಗಳ ಕಾಲ ಕುಂಭದ್ರೋಣ ಮಳೆಯಾಗಿ ರಾಜಧಾನಿ ಸೇರಿದಂತೆ ಹಲವು ನಗರಗಳಲ್ಲಿ ನೀರು ನುಗ್ಗಿ ಜನಜೀವ ಅಸ್ತವ್ಯಸ್ತವಾಗಿತ್ತು. ಅಪಾರ ಪ್ರಮಾಣದ ಬೆಳೆ, ಆಸ್ತಿಪಾಸ್ತಿ ಹಾನಿಯೂ ಉಂಟಾಗಿತ್ತು.
ಇದೀಗ ಜೂನ್ 3 ರಂದು ಕೇರಳಕ್ಕೆ ಮಾನ್ಸೂನ್ ಬಂದು ಅಪ್ಪಳಿಸುವ ಸಾಧ್ಯತೆ ಇದೆ. ಈ ಅಂದಾಜಿನ ಮೇಲೆ ಮುಂದಿನ ವಾರ ರಾಜ್ಯದಲ್ಲಿ ಮುಂಗಾರು ಆರಂಭವಾಗುವ ಸೂಚನೆ ಇದೆ.
PublicNext
31/05/2022 09:45 am