ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯಾದ್ಯಂತ ನಾಲ್ಕು ದಿನ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ನಾಲ್ಕು ದಿನ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಜೂನ್‌ 7ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ತಿಳಿಸಿದೆ.

ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಎಲ್ಲೆಲ್ಲಿ ಅತಿ ಹೆಚ್ಚು ಮಳೆ:

ಗುರುವಾರ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ 5 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಮಾಣಿ, ತುಮಕೂರು ಜಿಲ್ಲೆಯ ಬರಗೂರಿನಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ ಎಂದಿದೆ.

ಗರಿಷ್ಠ ಉಷ್ಣಾಂಶ:

ಕಲಬುರಗಿ ಮತ್ತು ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ ಎಂದು ಮಾಹಿತಿ ನೀಡಿದೆ.

Edited By : Nirmala Aralikatti
PublicNext

PublicNext

03/06/2022 07:18 pm

Cinque Terre

21.11 K

Cinque Terre

0