ರಾಜ್ಯದಲ್ಲಿ ಕರಾವಳಿ ಭಾಗಗಳಲ್ಲಿ ಜೂನ್ 16ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಕಾಲ ಸನಿಹವಾಗಿರುವ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಲಕ್ಷಣಗಳಿವೆ.
ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ‘ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
PublicNext
12/06/2022 08:27 am