ನವದೆಹಲಿ: ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಒಡಿಶಾ ಹಾಗೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ ನಾಲ್ಕು ದಿನದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈರುತ್ಯ ಮುಂಗಾರು ಮಾರುತಗಳು ಕರಾವಳಿಗೆ ಅಪ್ಪಳಿಸುತ್ತಿವೆ. ಜೊತೆಗೆ ಗಾಳಿ ಕೂಡ ವೇಗವಾಗಿ ಬೀಸುತ್ತಿರುವ ಕಾರಣದಿಂದ ಹವಮಾನದಲ್ಲಿ ಬದಲಾವಣೆ ಉಂಟಾಗಿ ಗುಡುಗು ಸಹಿತ ಮಳೆಯಾಗುತ್ತದೆ. ಆದ್ದರಿಂದ ಜನರು ಜಾಗೃತೆಯಾಗಿರಿ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯನ್ನ ನೀಡಿದೆ.
PublicNext
19/06/2022 05:53 pm