ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಫ್ಘಾನ್‌ನಲ್ಲಿ ಪ್ರಬಲ ಭೂಕಂಪ; 250ಕ್ಕೂ ಅಧಿಕ ಜನರ ಸಾವು.! ಪಾಕ್‌ನಲ್ಲೂ ಕಂಪನ

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಬುಧವಾರ (ಜೂನ್ 22) ನಸುಕಿನ ವೇಳೆ ಸಂಭವಿಸಿದ ಭಯಾನಕ ಭೂಕಂಪನದಲ್ಲಿ ಕನಿಷ್ಠ 250 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅಫ್ಘಾನಿಸ್ತಾನದ ಪೂರ್ವ ಭಾಗದಲ್ಲಿ ರಿಕ್ಟರ್ ಮಾಪಕದಲ್ಲಿ 6.1ರಷ್ಟು ತೀವ್ರತೆಯಲ್ಲಿ ಭೂಮಿ ಕಂಪಿಸಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.

ಸಾವು-ನೋವಿನ ನಿಖರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ ಎಂದು ವರದಿ ಹೇಳಿದೆ. ಭೂಕಂಪವು ಪಾಕಿಸ್ತಾನದ ಗಡಿ ಸಮೀಪ ಇರುವ ಖೋಸ್ಟ್ ನಗರದಿಂದ ಸುಮಾರು 44 ಕಿಲೋ ಮೀಟರ್ ದೂರದಲ್ಲಿ ಸಂಭವಿಸಿದೆ.

ಭೂಕಂಪ ಕೇವಲ ಅಫ್ಘಾನಿಸ್ತಾನ ಮಾತ್ರವಲ್ಲ ಪಾಕಿಸ್ತಾನದ ಲಾಹೋರ್, ಮುಲ್ತಾನ್, ಕ್ವೆಟ್ಟಾ ಸೇರಿದಂತೆ ಹಲವೆಡೆ ಭೂಕಂಪ ಸಂಭವಿಸಿದೆ. ಕೆಲವು ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ್ದ ಪರಿಣಾಮ ಜನರು ಹೆದರಿ ಮನೆಯಿಂದ ಹೊರ ಓಡಿಹೋಗುತ್ತಿರುವ ದೃಶ್ಯ ಕಂಡು ಬಂದಿರುವುದಾಗಿ ವರದಿ ವಿವರಿಸಿದೆ.

Edited By : Vijay Kumar
PublicNext

PublicNext

22/06/2022 12:47 pm

Cinque Terre

56.01 K

Cinque Terre

2

ಸಂಬಂಧಿತ ಸುದ್ದಿ