ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ : ಹವಾಮಾನ ಇಲಾಖೆ

ಬೆಂಗಳೂರು : ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಅಂದ್ರೆ ಜೂನ್ 26ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಿಲಾಖೆ ಮನ್ಸೂಚನೆ ಕೊಟ್ಟಿದೆ.

ಈ ಹಿನ್ನೆಲೆ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಫೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸಾಧ್ಯತೆಯಿದೆ.

ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ವಿಜಯಪುರ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Edited By : Nirmala Aralikatti
PublicNext

PublicNext

23/06/2022 07:18 am

Cinque Terre

50.73 K

Cinque Terre

2