ನವದೆಹಲಿ: ಜೂನ್ 24-26ರ ಅವಧಿಯಲ್ಲಿ ಕೊಂಕಣ, ಗೋವಾ ಮತ್ತು ಕರಾವಳಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಅಂತ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ತಿಳಿಸಿದ್ದು, ಇದೇ ವೇಳೇ ಆರೆಂಜ್ ಅಲರ್ಟ್ ಘೋಷಿಸಿದೆ.
ಜೂನ್ 24 ಮತ್ತು 25 ರಂದು ಮಳೆಯಾಗಲಿದ್ದು, ಈ ನಡುವೆ ಹವಮಾನ ಇಲಾ ಮಧ್ಯ ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮತ್ತು ಜೂನ್ 25 ರಂದು ದಕ್ಷಿಣ ಗುಜರಾತ್ ನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ. ಮಳೆಯ ಮುನ್ಸೂಚನೆಗಳು ರಾಜ್ಯಗಳು ಹೀಗಿದೆ ಮುಂದಿನ 5 ದಿನಗಳಲ್ಲಿ ಉಪ ಹಿಮಾಲಯದ ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
PublicNext
24/06/2022 05:21 pm