ಮಡಿಕೇರಿ: ಕೊಡಗು ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಬಾಗದಲ್ಲಿ ಗುರುವಾರ ತಡರಾತ್ರಿ ಮತ್ತೆ ಭೂಮಿ ಕಂಪಿಸಿದೆ. ಬೆಚ್ಚಿಬಿದ್ದ ಜನ ಮನೆಯಿಂದ ಆಚೆ ಓಡಿ ಬಂದಿದ್ದಾರೆ.
ತಡರಾತ್ರಿ 1.12 ಗಂಟೆ ಸುಮಾರಿಗೆ ಕೊಡಗು ಜಿಲ್ಲೆಯ ಚೆಂಬು, ಪೆರಾಜೆ, ಕರಿಕೆ ಸಂಪಾಜೆಯಲ್ಲಿ ಲಘು ಭೂಕಂಪನವಾಗಿದ್ದು, ಮಲಗಿದ್ದ ಜನರು ಭೂಕಂಪನದಿಂದ ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಸಂಪಾಜೆ, ಕಲ್ಲುಂಡಿ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಕಳೆದೊಂದು ವಾರದಲ್ಲಿ ಐದು ಬಾರಿ ಭೂಮಿ ಕಂಪಿಸಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
PublicNext
01/07/2022 07:21 am