ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾವಿನ ದವಡೆಯಿಂದ ಪಾರಾಗಲು ಮನೆಗೆ ನುಗ್ಗಿದ ಜಿಂಕೆ

ಚಿಕ್ಕಮಗಳೂರು: ಸೀಳು ನಾಯಿ ಹಾಗೂ ಬೀದಿನಾಯಿಗಳ ಹಾವಳಿಗೆ ಬೆದರಿದ ಜಿಂಕೆಯೊಂದು ಮನೆಯೊಳಗೆ ಬಂದು ಅವಿತು ಕುಳಿತುಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಗ್ರಾಮದಲ್ಲಿ ನಡೆದಿದೆ.

ಕಣಿವೆ ಗ್ರಾಮ ಕಾಡಂಚಿನ ಗ್ರಾಮ. ಮೇವು ತಿನ್ನುತ್ತಾ ಕಾಡಂಚಿಗೆ ಬಂದ ಜಿಂಕೆ ನಾಡಿಗೂ ಕಾಲಿಟ್ಟಿತ್ತು. ಜಿಂಕೆಯನ್ನ ಕಂಡ ಬೀದಿ ನಾಯಿಗಳು ಹಾಗೂ ಸೀಳು ನಾಯಿಗಳು ಜಿಂಕೆಯನ್ನ ಬೇಟೆಯಾಡಲು ಮುಂದಾದವು.

ಆಗ ಅವುಗಳಿಂದ ತಪ್ಪಿಸಿಕೊಂಡ ಜಿಂಕೆ ಕಣಿವೆ ಗ್ರಾಮದ ಪದ್ಮನಾಭ ಎಂಬುವರ ಮನೆಯೊಳಗೆ ಓಡಿ ಬಂದು ಅವಿತು ಕೂತಿದೆ. ಎಷ್ಟರ ಮಟ್ಟಿಗೆ ಅಂದ್ರೆ ಮನೆಯವರಂತೆ ನಡುಮನೆಯಲ್ಲಿ ಆರಾಮಾಗಿ ರಾಜಾರೋಷವಾಗಿ ಕೂತಿದೆ.

ಇನ್ನು ಜಿಂಕೆಯನ್ನ ಕಂಡ ಮನೆಯವರು ಕೂಡ ಅದನ್ನ ಓಡಿಸದೆ ಸುಸ್ತಾಗಿದ್ದ ಜಿಂಕಿಗೆ ನೀರು ಕುಡಿಸಿ ಸಂತೈಸಿದ್ದಾರೆ. ಬಳಿಕ ಮನೆಯವರು ಹಾಗೂ ಮಕ್ಕಳು ಜಿಂಕೆಯೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ.

ಬಳಿಕ ಮನೆಯವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಜಿಂಕೆಯನ್ನ ಜೀಪಿನಲ್ಲಿ ತೆಗೆದುಕೊಂಡು ಹೋಗಿದ್ದಾರೆ.

ಮನೆಯೊಳಗೆ ಬಂದು ನೆಂಟರಂತೆ ಕೂತ ಜಿಂಕೆಯನ್ನ ಅಕ್ಕಪಕ್ಕದವರು ಬಂದು ನೋಡಿ ಖುಷಿ ಪಟ್ಟಿದ್ದಾರೆ.

Edited By : Somashekar
PublicNext

PublicNext

04/07/2022 08:25 pm

Cinque Terre

61.95 K

Cinque Terre

1