ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬುಧವಾರವೂ ಭಾರಿ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 7ರಂದು ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, 'ರೆಡ್ ಅಲರ್ಟ್' ಘೋಷಿಸಲಾಗಿದೆ.
ಇನ್ನು ಕೊಡಗು ಜಿಲ್ಲೆಯಲ್ಲಿ ಸತತ 5ನೇ ದಿನವೂ ಧಾರಾಕಾರ ಮಳೆ ಸುರಿದಿದೆ. ಮತ್ತೆ ಭಾರಿ ಮಳೆಯ ಮುನ್ಸೂಚನೆಯಿದ್ದು, ಗುರುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಹುಬ್ಬಳ್ಳಿ, ಧಾರವಾಡ, ಉತ್ತರ ಕನ್ನಡ, ಬೆಳಗಾವಿ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ದೂಧಗಂಗಾ ಹಾಗೂ ವೇದಗಂಗಾ ಉಪನದಿಗಳು ಮೈದುಂಬಿ ಹರಿಯುತ್ತಿವೆ. ಹಾಸನ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯಾಗಿದೆ.
ಭಾರಿ ಮಳೆ ಹಿನ್ನೆಲೆಯಲ್ಲಿ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಲಾ–ಕಾಲೇಜುಗಳಿಗೆ ಗುರುವಾರ ರಜೆ ಘೋಷಣೆ ಮಾಡಲಾಗಿದೆ. ಕಡಲು ಪ್ರಕ್ಷುಬ್ಧವಾಗಿದ್ದು, ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
PublicNext
07/07/2022 09:03 am