ಹಾಸನ: ಸಕಲೇಶಪುರ ತಾಲ್ಲೂಕಿನ ಕಿರಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ಹಿಂಡು ಹಿಂಡಾಗಿ ರಸ್ತೆ ದಾಟಿ ಕಾಫಿ ತೋಟಕ್ಕೆ ಎಂಟ್ರಿ ಕೊಟ್ಟ ದೃಶ್ಯವನ್ನು ಸವಾರರೊಬ್ಬರು ಸೆರೆ ಹಿಡಿದಿದ್ದಾರೆ.
ಮರಿಗಳು ಸೇರಿ 24 ಕಾಡಾನೆಗಳ ಹಿಂಡು ರಸ್ತೆ ದಾಟಿ ಕಾಫಿ ತೋಟದೊಳಗೆ ಹೋಗಿವೆ. ಕಾಡಾನೆಗಳ ದಾಂಧಲೆಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಕಾಫಿ, ಮೆಣಸು, ಬಾಳೆಗಳನ್ನು ಕಾಡಾನೆಗಳು ತಿಂದು, ತುಳಿದು ನಾಶ ಮಾಡುತ್ತವೆ. ಅಷ್ಟೇ ಅಲ್ಲದೆ ಕಾಡಾನೆಗಳ ಓಡಾಟದಿಂದ ಕಾಫಿ ತೋಟದ ಕೆಲಸಕ್ಕೆ ಬರಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ ಎಂದು ಸಕಲೇಶಪುರ ತಾಲ್ಲೂಕಿನ ಗ್ರಾಮಸ್ಥರು ದೂರಿದ್ದಾರೆ.
PublicNext
09/07/2022 09:50 am