ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಂದಿನ 48 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಜುಲೈ 14ರವರೆಗೆ ಮಳೆ ಮುಂದುವರೆಯಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಿಂದ ಜುಲೈ 13ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಅವಧಿಯಲ್ಲಿ ಭಾರಿ ಮಳೆಯಾಗಲಿದೆ ಹೀಗಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 45 ರಿಂದ 55 ಕಿ.ಮೀ ಇರಲಿದ್ದು 65 ಕಿ.ಮೀ ವರೆಗೂ ತಲುಪುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ಎಚ್ಚರಿಕೆ ನೀಡಿದೆ.

ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಜುಲೈ 14ರವರೆಗೆ ಮಾತ್ರ ಹಾಸನ ಜಿಲ್ಲೆಗೆ ಯಲ್ಲೋ ಅಲರ್ಟ್‌ ನೀಡಲಾಗಿದೆ ಎಂದು ಮಾಹಿತಿ ನೀಡಿದೆ.

ಉತ್ತರದಲ್ಲಿ ಆರೆಂಜ್ ಅಲರ್ಟ್:

ಉತ್ತರ ಒಳನಾಡಿನಲ್ಲಿ ಕೂಡ ಭಾರಿ ಮಳೆ ಬೇಳಲಿದೆ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಮಾಹಿತಿ ನೀಡಿದೆ.

Edited By : Vijay Kumar
PublicNext

PublicNext

11/07/2022 04:34 pm

Cinque Terre

25.97 K

Cinque Terre

1

ಸಂಬಂಧಿತ ಸುದ್ದಿ