ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಇನ್ನು ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಈ ಮಧ್ಯೆ ಮತ್ತಷ್ಟು ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರ್ನಾಟಕದಲ್ಲಿ ರಾಜಧಾನಿ ಬೆಂಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ವ್ಯಾಪಕವಾಗಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಯಾದಗಿರಿ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಲಿದ್ದು, ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.
PublicNext
11/07/2022 05:29 pm