ಬೆಂಗಳೂರು: ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದ್ದು, ಇನ್ನೂ ಮೂರು ದಿನ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 1 ವಾರದಿಂದ ಕರಾವಳಿಯಲ್ಲಿ ಆರ್ಭಟಿಸಿದ್ದ ಮಳೆ ಸ್ವಲ್ಪ ತಗ್ಗಿದ್ದು, ಮುಂದಿನ 3 ದಿನಗಳು ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಜುಲೈ 16 ರವರೆಗೂ ಆರೆಂಜ್ ಅಲರ್ಟ್ ಘೊಷಿಸಲಾಗಿದೆ.
ಇಂದು 64.5ರಿಂದ 115.5ಮಿ.ಮೀ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ.ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ 115.6ಮಿ.ಮೀ ನಿಂದ 204.4ಮಿ.ಮೀನಷ್ಟು ಭಾರೀ ಮಳೆಯಾಗಲಿದೆ ಎಂಬುದಾಗಿ ಮಾಹಿತಿ ನೀಡಿದೆ. ನಾಳೆ ಮೈಸೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಗಾಲಿದೆ. ಸುಮಾರು 64.5ರಿಂದ 115.5ಮಿ.ಮೀ ನಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಜುಲೈ.15ರಂದು ಕೂಡ ಭಾರೀ ಮಳೆ ಮುಂದುವರೆಯಲಿದೆ. ಅಂದು ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸುಮಾರು 64.5ರಿಂದ 115.5ಮಿ.ಮೀ ನಷ್ಟು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
PublicNext
13/07/2022 08:12 am