ಬೆಂಗಳೂರು: ಈಗಾಗಲೇ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ರಾಜ್ಯದ ಜನತೆ ಹೈರಾಣಾಗಿ ಹೋಗಿದ್ದಾರೆ. ಈ ನಡುವೆ ರಾಜ್ಯಾಧ್ಯಂತ ಇನ್ನೂ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ರಾಜ್ಯ ಹವಾಮಾನ ಇಲಾಖೆಯು, ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದಾಗಿ ಮುಂದಿನ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಗಾಳಿ ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಇನ್ನೂ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೇ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 2 ದಿನ ಮಳೆಯಾಗಲಿದೆ ಎಂದು ತಿಳಿಸಿದೆ.
ಉತ್ತರ ಒಳನಾಡಿನಲ್ಲಿಯೂ ಮಳೆಯಾಗುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ ಎಂದು ಮುನ್ಸೂಚನೆ ನೀಡಿದೆ.
PublicNext
16/07/2022 07:59 am