ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO: ತಡೆಕಂಬ ಇದ್ದರೂ ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ

ಏಲೂರು: ರಭಸದಿಂದ ಹರಿಯುವ ಹಳ್ಳದಲ್ಲಿ ವ್ಯಕ್ತಿಯೋರ್ವ ಕೊಚ್ಚಿ ಹೋದ ಘಟನೆ ಆಂಧ್ರ ಪ್ರದೇಶದ ಏಲೂರು ಜಿಲ್ಲೆಯಲ್ಲಿ ನಡೆದಿದೆ‌.

ಸದ್ಯ ಆಂಧ್ರದ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ‌. ಪರಿಣಾಮ ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಬಿ ಹರಿಯುತ್ತಿರುವ ಹಳ್ಳ ದಾಟಲು ಹೋದ ವ್ಯಕ್ತಿಯೋರ್ವ ಕೊಚ್ಚಿ ಹೋದ ಘಟನೆ ಜಿಲ್ಲೆಯಲ್ಲಿ ನಡೆದಿದೆ‌. ಕೆಳಹಂತದ ಸೇತುವೆಯ ಎರಡೂ ಬದಿಯಲ್ಲಿ ತಡೆಕಂಬಗಳು ಇದ್ದರೂ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ‌‌. ಈ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.

Edited By : Nagaraj Tulugeri
PublicNext

PublicNext

27/07/2022 02:06 pm

Cinque Terre

44.7 K

Cinque Terre

2