ಬೆಳಗಾವಿ: ನಗರದ ಕ್ಲಬ್ ರಸ್ತೆಯ ಪಕ್ಕದ ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸೋಮವಾರ ನಗರದ 22 ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಬೆಳಗಾವಿಯ ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕನ ಮೇಲೆ ಚಿರತೆ ದಾಳಿ ಮಾಡಿ ನಾಪತ್ತೆಯಾಗಿತ್ತು.
ಇದೀಗ ಮತ್ತೆ ಭಾನುವಾರ ಕ್ಲಬ್ ರಸ್ತೆಯ ಪಕ್ಕದ ಗಾಲ್ಫ್ ಮೈದಾನದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಕ್ಲಬ್ ರಸ್ತೆಯ ಪಕ್ಕದ ಸುತ್ತಮುತ್ತಲಿನ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿ ಡಿಡಿಪಿಐ ಬಸವಾರಾಜ ನಾಲತವಾಡ ಮತ್ತು ನಗರ ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಭಜಂತ್ರಿ ಆದೇಶ ಹೊರಡಿಸಿದ್ದಾರೆ.
ಗಾಲ್ಫ್ ಮೈದಾನದ ಒಂದು ಕಿ.ಮೀ.ವ್ಯಾಪ್ತಿಯ 22 ಶಾಲೆಗಳಿಗೆ ಇಂದು ರಜೆ ಗಾಲ್ಫ್ ಮೈದಾನದ ಸಮೀಪ ಇರುವ 22 ಶಾಲೆಗಳಿಗೆ ರಜೆಯನ್ನು ನೀಡಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಕ್ರಮವಾಗಿ ಜಾಧವ ನಗರ, ಹನುಮಾನ ನಗರ, ಕುವೆಂಪು ನಗರ, ವಿಶ್ವೇಶ್ವರ ನಗರ, ಸಹ್ಯಾದ್ರಿ ನಗರ,ದೂರದರ್ಶನ ಕೇಂದ್ರ, ಕ್ಯಾಂಪ್ ಪ್ರದೇಶ ಹಿಂಡಲಗಾ, ಮತ್ತು ವಿಜಯನಗರದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
PublicNext
08/08/2022 11:31 am