ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಆರೆಂಜ್ ನೀಡಲಾಗಿದೆ. ಆಗಸ್ಟ್ 10 ಮತ್ತು 11ರಂದು ಯೆಲ್ಲೋ ಅಲರ್ಟ್ ಇರಲಿದೆ ಎಂದು ಹೇಳಿದೆ. ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಶಿವಮೊಗ್ಗ, ಬೆಳಗಾವಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ ಎಂದು ಮಾಹಿತಿ ನೀಡಿದೆ.
ಮೀನುಗಾರರಿಗೆ ಎಚ್ಚರಿಕೆ:
ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 65 ಕಿ.ಮೀ ತಲುಪುವ ಸಾಧ್ಯತೆಯಿದೆ. ಆದ್ದರಿಂದ, ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ಇಲಾಖೆ ಸೂಚಿಸಿದೆ.
ಸಿಲಿಕಾನ್ ಸಿಟಿಯಲ್ಲಿ ಸಾಧಾರಣ ಮಳೆ:
ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಒಂದೆರಡು ಬಾರಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
PublicNext
08/08/2022 04:03 pm