ಕರ್ನಾಟಕದಲ್ಲಿ ಇಂದು ಮತ್ತು ನಾಳೆ ವರುಣ ಅಬ್ಬರಿಸಲಿದ್ದಾನೆ. ಅದರಲ್ಲೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಕರಾವಳಿ ಭಾಗದಲ್ಲಿ ಇಂದು (ಆ. 25) ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿಯಲ್ಲಿ ಗಾಳಿ, ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
PublicNext
25/08/2022 06:58 am