ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ;

ಬೆಂಗಳೂರು- ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈ 7 ಜಿಲ್ಲೆಗಳಲ್ಲಿಯೂ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ತುಮಕೂರು, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಮನಗರ ಜಿಲ್ಲೆಗಳಲ್ಲಿಯೂ ಅಧಿಕ ಮಳೆಯಾಗಲಿದೆ. ಒಟ್ಟಾರೆ ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಸಹಿತ ಮಳೆಯಾಗುವ ಸಂಭವವಿದೆ ಎಂದು ಸೂಚಿಸಿದೆ.

Edited By : Abhishek Kamoji
PublicNext

PublicNext

28/08/2022 04:11 pm

Cinque Terre

54.5 K

Cinque Terre

0

ಸಂಬಂಧಿತ ಸುದ್ದಿ