ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ, ಬಂಗಾಳಕೊಲ್ಲಿಯಲ್ಲಿನ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆಗೆ ಪೂರಕ ವಾತಾವರಣ ಇರುವುದರಿಂದ, ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಬೆಳಗಾವಿ, ಗದಗ, ಕೊಪ್ಪಳ, ಹಾವೇರಿ, ಧಾರವಾಡ, ದಾವಣಗೆರೆ, ಬಳ್ಳಾರಿ, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ, ಚಿಕ್ಕಮಗಳೂರು, ಮಂಡ್ಯ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
PublicNext
29/08/2022 05:42 pm