ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಸೆ. 7ರವರೆಗೆ ಭಾರಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕಾಗಿದ್ದು,ಕರಾವಳಿ ಜಿಲ್ಲೆ ಸೇರಿದಂತೆ ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಮೂರು ಜಿಲ್ಲೆಗಳಲ್ಲಿ ಸೆ.3,6,9 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ದಕ್ಷಿಣ ಒಳನಾಡು ಜಿಲ್ಲೆಗಳಾದ ಕೊಡಗು,ಚಿಕ್ಕಮಂಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸೆ.3 ಹಾಗೂ 7ವೆರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆ ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳ ಕಾಲ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಾಸನದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಎಚ್ಚರಿಕೆ:

ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಘಂಟೆಗೆ 40-50 ಕಿ.ಮೀ. ಇರಲಿದ್ದು, 60 ಕಿ.ಮೀ. ವರೆಗೂ ತಲುಪುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಬಾರಿ ಹಗುರದಿಂದ ಸಾಧಾರಣ ಮಳೆ, ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.

Edited By : Nirmala Aralikatti
PublicNext

PublicNext

02/09/2022 06:04 pm

Cinque Terre

15.75 K

Cinque Terre

0

ಸಂಬಂಧಿತ ಸುದ್ದಿ