ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೆ. 8ವರೆಗೆ ರಾಜ್ಯದಲ್ಲಿ ಮಳೆ

ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಹೀಗಾಗಿ, ಸೆ.8 ವರೆಗೆ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 48 ಘಂಟೆಗಳ ಕಾಲ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿಯ ಹಲವು ಕಡೆಗಳಲ್ಲಿ ಮಳೆ, ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಸೆ.6 ರಿಂದ 8 ವರೆಗೆ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಸೆ.5 ವರೆಗೆ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 48 ಘಂಟೆಗಳ ಕಾಲ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ, ಮಂಡ್ಯ, ಕೊಡಗು, ಶಿವಮೊಗ್ಗ, ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಸೆ. 5 ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಒಂದೆರಡು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.

Edited By : Nagaraj Tulugeri
PublicNext

PublicNext

03/09/2022 10:35 pm

Cinque Terre

51.78 K

Cinque Terre

0

ಸಂಬಂಧಿತ ಸುದ್ದಿ