ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಸೇರಿದಂತೆ ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದರ ಬೆನ್ನಲ್ಲೆ ರಾಜ್ಯಾದ್ಯಂತ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ, ಮಲೆನಾಡು ಒಳಡೊಂಡ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೆ.6 ದಿಂದ 10ರ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಕೋಲಾರ ಜಿಲ್ಲೆಗಳ ಸೆ.10 ವರಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಗಂಟೆಗಳ ಕಾಲ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಭಾರಿ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.
PublicNext
05/09/2022 10:28 pm