ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ: ನಾಳೆ ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್ ಘೋಷಣೆ!

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಅತಿ ಹೆಚ್ಚು ಮಳೆ ಬೀಳುವ ಸೂಚನೆಯನ್ನು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿದೆ.

ಈ ಅವಧಿಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸೆ.08ರ ಬೆಳಿಗ್ಗೆ 8.30ರಿಂದ ಸೆ.10ರ ಬೆಳಿಗ್ಗೆ 8.30ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಈ ಸಮಯದಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವಂತಹ ಜನರಿಗೆ ಸೂಕ್ತ ತಿಳುವಳಿಕ ನೀಡಿ, ಅಲ್ಲಿನ ಜನ- ಜಾನುವಾರುಗಳನ್ನು ಮುಂಚಿತವಾಗಿ ಸುರಕ್ಷಿತ ಸ್ಥಳಕ್ಕೆ ಸಾಗಿಸುವ ಬಗ್ಗೆ ತಾಲೂಕಾಡಳಿತವು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಈ ಸಮಯದಲ್ಲಿ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ತಾಲೂಕಿನ ನೋಡಲ್ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಸಾರ್ವಜನಿಕರು, ಮೀನುಗಾರರು ಹಾಗೂ ಪ್ರವಾಸಿಗರು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ಮೀನುಗಾರರು ಈ ಸಂದರ್ಭದಲ್ಲಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

Edited By : Abhishek Kamoji
PublicNext

PublicNext

06/09/2022 07:41 pm

Cinque Terre

18.91 K

Cinque Terre

0